![]() |
| ಸಾಂದರ್ಭಿಕ ಚಿತ್ರ |
ಬೆಂಗಳೂರು: ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕವನ್ನೇ ನೀಡಲು ತೀರ್ಮಾನಿಸಿರುವ ರಾಜ್ಯ ಸರಕಾರ, ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸೆಸೆಲ್ಸಿ ಫಲಿತಾಂಶ ಪ್ರಕಟಿಸುವುದಾಗಿ ಹೇಳಿಕೊಂಡಿದೆ. ಈ ಮೊದಲು ಎ.24ಕ್ಕೆ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಲಾಗಿತ್ತು. ಈಗ ಒಂದು ದಿನ ಮುಂಚಿತವಾಗಿಯೇ ಪ್ರಕಟಿಸಲು ಶಿಕ್ಷಣ ಸಚಿವರು ನಿರ್ಧರಿಸಿದ್ದಾರೆ. ಅಲ್ಲದೆ, ಅವರು ಸುದ್ದಿಗೋಷ್ಠಿ ಮೂಲಕವೂ ಮಾಹಿತಿ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಗುರುವಾರ ಮಧ್ಯಾಹ್ನ 12 ಗಂಟೆಗೆ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟ ಆಗಲಿದೆ ಎಂದು ತಿಳಿಸಿದ್ದಾರೆ.
