ಉಡುಪಿ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಹಾಗೂ ಓವರ್‌ಲೋಡಿಂಗ್ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.
ದಿನಾಂಕ 25-04-2026 ರಂದು ಹಮ್ಮಿಕೊಳ್ಳಲಾದ ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಲಾಗಿದ್ದು, ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್‌ಲೋಡಿಂಗ್) ಮಾಡುತ್ತಿದ್ದ ಒಟ್ಟು ಸುಮಾರು 13 ವಾಹನಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಎಲ್ಲಾ ವಾಹನಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮೈನ್ಸ್ ಅಂಡ್ ಜಿಯಾಲಜಿ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಅಕ್ರಮ ಮರಳು ಸಾಗಾಣಿಕೆ ತಡೆಗೆ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.


