ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡು ಸಿ.ಇ.ಐ.ಆರ್ ಪೋರ್ಟ್‌ಲ್ ಮೂಲಕ ದೂರು ದಾಖಲಿಸಿದ್ದ ಪ್ರಕರಣಗಳ ಪತ್ತೆಗಾಗಿ ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿದ ಮೊಬೈಲ್‌ಗಳನ್ನು ಮರಳಿ ನೀಡುವ ಕಾರ್ಯಕ್ರಮವನ್ನು ಇಂದು ಜಿಲ್ಲಾ ಪೊಲೀಸ್ ಹಮ್ಮಿಕೊಂಡಿತ್ತು.
ಜಿಲ್ಲೆಯ ಎಲ್ಲಾ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಮೊಬೈಲ್ ಕಳೆದುಕೊಂಡಿದ್ದ ಮೂಲ ವಾರಸುದಾರರಿಗೆ ಅವರ ಮೊಬೈಲ್‌ಗಳನ್ನು ಹಸ್ತಾಂತರಿಸಲಾಯಿತು.
ಸುಮಾರು 241 ಮೊಬೈಲ್‌ಗಳನ್ನು ವಾರಸುದಾರರಿಗೆ ಯಶಸ್ವಿಯಾಗಿ ಹಿಂತಿರುಗಿಸಲಾಗಿದ್ದು ಮೊಬೈಲ್ ಮರಳಿ ಪಡೆದವರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಯಿತು.

