ಉಡುಪಿ: ಪ್ರೀತಂ ಜಿ.ಪೂಜಾರಿ 625 / 625 ಅಭೂತಪೂರ್ವ ಸಾಧನೆ - ಕಾರ್ಕಳ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ 625 ರಲ್ಲಿ 624 ಅಂಕ !

ಪ್ರೀತಂ ಜಿ.ಪೂಜಾರಿ

ಉಡುಪಿ: 2025-26ನೇ ಸಾಲಿನ ಎಸ್​ಎಸ್​ _ಎಲ್_ ​ಸಿ ಪರೀಕ್ಷೆಯ ಫಲಿತಾಂಶ ಬುಧವಾರ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 

ಎಸ್​ಎಸ್​ಎಲ್​ಸಿ ಫಲಿತಾಂಶ: 7 ಮಂದಿ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ 

ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಶಂಕರನಾರಾಯಣ ಶಾಲೆಯ ಪ್ರೀತಂ ಜಿ. ಪೂಜಾರಿ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. 

ಜಿಲ್ಲೆಯ ಓರ್ವ ವಿದ್ಯಾರ್ಥಿಗೆ 625 ಅಂಕ ,  ಇಬ್ಬರಿಗೆ 624 ಅಂಕ ! 



ಉಡುಪಿ ಜಿಲ್ಲೆಯ ಶಂಕರನಾರಾಯಣ ಮದರ್ ತೆರೆಸಾ ಆಂಗ್ಲ ಮಾದ್ಯಮ ಶಾಲೆಯ ಪ್ರೀತಂ ಜಿ.ಪೂಜಾರಿ 625 ಕ್ಕೆ 625 ಅಂಕ ಗಳಿಸಿ ಅಭೂತಪೂರ್ವ ಸಾಧನೆ ಮಾಡಿದ್ದರೆ,  ಕಾರ್ಕಳದ ಜ್ಞಾನ ಸುಧಾ ಇಂಗ್ಲಿಷ್ ಮೀಡಿಯಂ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು 625 ಕ್ಕೆ 624 ಅಂಕ ಗಳಿಸಿದ್ದಾರೆ. ಮಹಾಲಕ್ಷ್ಮೀ ಭಾರ್ಗವ್ ಮತ್ತು ಮಹಾಲಕ್ಷ್ಮೀ ಪೈ ಬಿ , ಈ ಸಾಧನೆ ಮಾಡಿದ ವಿದ್ಯಾರ್ಥಿನಿಯರಾಗಿದ್ದಾರೆ.