![]() |
| ಆರೋಪಿ ಎಂ.ಬಾಬು |
ಉಡುಪಿ: ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂ. ಬಾಬು (52) ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯ ಪತ್ತೆಗಾಗಿ ಪೊಲೀಸರು ಕಳೆದ ಐದು ತಿಂಗಳಿನಿಂದ ನಿರಂತರ ಕಾರ್ಯಾಚರಣೆ ನಡೆಸಿದ್ದರು.
ಖಚಿತ ಮಾಹಿತಿಯ ಮೇರೆಗೆ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ಸುರೇಶ್ ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ವಿಶ್ವನಾಥ್ ಎಚ್ ಅವರು ಬೆಂಗಳೂರಿಗೆ ತೆರಳಿ, ರಾಮಮೂರ್ತಿನಗರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಬಂಧಿತನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಏಪ್ರಿಲ್ 28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
