ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ



ಉಡುಪಿ, ಎ.೧: ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ ೧೩ ವರ್ಷಗಳಿಂದ ಸ್ಟೋರ್ ಹೆಡ್ ಆಗಿ ಸೇವೆ ಸಲ್ಲಿಸಿ ಇದೀಗ ವರ್ಗಾವಣೆಗೊಂಡ ಹಫೀಝ್ ರೆಹಮಾನ್ ಅವರಿಗೆ ಬುಧವಾರ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಯಿತು.

ಉಡುಪಿ ಶಾಖೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಹಫೀಝ್ ರೆಹಮಾನ್ ಅವರನ್ನು ಮಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸನ್ಮಾನಿಸಿದರು.



ಈ ಸಂದರ್ಭದಲ್ಲಿ ಉಡುಪಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್, ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಹರೀಶ್ ಎಂ.ಜಿ., ಸಂದೀಪ್, ರಾಘವೇಂದ್ರ, ತಂಝೀಮ್ ಶಿರ್ವ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.