ಉಡುಪಿ: ಅಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ



ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ‌ ಮೊದಲ ಭಾರತೀಯ ಕಾರ್ಕಳದ  ಆಯುಷ್ ಶೆಟ್ಟಿ ಯನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ  ಕಚೇರಿಯಲ್ಲಿ  ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ  ಮಾಜಿ ಸಚಿವ ವಿಜಯಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು, ಆಯುಶ್ ಶೆಟ್ಟಿಯವರ ತಂದೆ ರಾಮ ಪ್ರಕಾಶ್ ಶೆಟ್ಟಿ, ತಾಯಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

ಆಯುಶ್ ಶೆಟ್ಟಿಯವರು ಚೀನಾದ ನಿಂಗ್ಬೋದಲ್ಲಿ ನಡೆದ ಪಂದ್ಯಾಟದಲ್ಲಿ ವಿಶ್ವದ ನಂ. 1 ಆಟಗಾರ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಭರ್ಜರಿಯಾಗಿ ಸೋಲಿಸಿ  ಪೈನಲ್ ಪ್ರವೇಶಗೈದು‌ 61 ವರ್ಷದ ಬಳಿಕ ಭಾರತಕ್ಕೆ ಬೆಳ್ಳಿ ಪದಕದ ಸಾಧನೆ ಮಾಡಿದ್ದರು.