ಉಡುಪಿ‌; ಪಿಯುಸಿ ಫಲಿತಾಂಶ- ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆಗೆ ಪ್ರಸಾದ್ ರಾಜ್ ಕಾಂಚನ್ ಪ್ರಶಂಸೆ



ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ‌ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆಗೆ ಉಡುಪಿಯ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 

ಕರಾವಳಿ ಜಿಲ್ಲೆ ಉಡುಪಿ ಶೈಕ್ಷಣಿಕವಾಗಿ ಮುಂದಿರುವ ಜಿಲ್ಲೆ, ಜಿಲ್ಲೆಯ ಹೊರಭಾಗಗಳಿಂದಲೂ  ಬಂದು ಇಲ್ಲಿ ವ್ಯಾಸಾಂಗ ಮಾಡುತ್ತಾರೆ. ಪ್ರತೀ ಬಾರಿ ಫಲಿತಾಂಶದಲ್ಲಿ ಮೊದಲೆರಡು ಸ್ಥಾನಗಳನ್ನು ಕಾಯ್ದುಕೊಳ್ಳುವ ಜಿಲ್ಲೆಯ ಮಕ್ಕಳ ಶೈಕ್ಷಣಿಕ ಸಾಧನೆ ಪ್ರಶಂಸನೀಯ. 

ಜಿಲ್ಲೆ ಅಗ್ರಸ್ಥಾನ ಪಡೆಯಲು ಕಾರಣೀಭೂತರಾದ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರಿಗೆ,  ಅದ್ಯಾಪಕ ವೃಂದದವರಿಗೆ, ಎಲ್ಲಾ‌ ಕಾಲೇಜುಗಳಿಗೆ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಪ್ರಸಾದ್ ರಾಜ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.