ಉಡುಪಿ: ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಬೆಳಿಗ್ಗೆ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು.
ಅಷ್ಟಬಂಧ ಸಹಿತವಾಗಿ ಪುನಃ ಪ್ರತಿಷ್ಠಾಪಿತ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರಿಗೆ ವೇದಮೂರ್ತಿ ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಬ್ರಹ್ಮಕುಂಭಾಭಿಷೇಕ ನೆರವೇರಿಸಲಾಯಿತು.
ಬೆಳಿಗ್ಗೆ ಗಣಹೋಮ, ಪ್ರಧಾನ ಕಲಾ ಸಾನಿಧ್ಯ ಹೋಮ, 1001 ಕಲಶಾರಾಧನೆ, ಪ್ರಸನ್ನ ಪೂಜೆ, ಮಹಾಪೂಜೆ, ಪಲ್ಲ ಪೂಜೆ ಜರುಗಿತು. ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು. ಶಂಕರ್ ಮತ್ತು ಬಳಗದಿಂದ ಭಕ್ತಿ ಸಂಗೀತ, ಪುತ್ತೂರು ಬೊಳುವಾರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದಿಂದ ಸಮರ ಸೌಗಂಧಿಕ ತಾಳಮದ್ದಳೆ ನಡೆಯಿತು.
ಇಂದ್ರಾಣಿ ಶ್ರೀಮುಖ್ಯಪ್ರಾಣ ಶ್ರೀ ನಾಗದೇವರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಶ್ರೀ ಮುಖ್ಯಪ್ರಾಣ ದೇವರ ಗುಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೂಪತಿ ಶೆಟ್ಟಿ ಇಂದ್ರಾಳಿ, ಇಂದ್ರಾಳಿ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ ಕುಶಲ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರತ್ನಾಕರ್ ಇಂದ್ರಾಳಿ, ಉಪಾಧ್ಯಕ್ಷ ಸಾಧು ಶೆಟ್ಟಿ, ಮಾಧ್ಯಮ ಮತ್ತು ಜಾಹಿರಾತು ಸಮಿತಿ ಸಂಚಾಲಕ ರವಿ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸೀತಾರಾಮ ನಾಯಕ್, ಕೋಶಾಧಿಕಾರಿ ಪಾಂಡುರಂಗ ನಾಯಕ್ ಮಂಚಿ ಉಪಸ್ಥಿತರಿದ್ದರು.
