ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಅದ್ವಿತೀಯ ಸಾಧನೆ ಮಾಡಿದೆ.
ದ್ವಿತೀಯ ಪಿಯುಸಿ ಫಲಿತಾಂಶ ದಲ್ಲಿ ಪ್ರಥಮ ಸ್ಥಾನ ಗಳಿಸಲು ಮತ್ತು ಉತ್ತಮ ರೀತಿಯಲ್ಲಿ ಪರೀಕ್ಷೆಗೆ ತಯಾರಿ ಮಾಡಿದ ಉಡುಪಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೂ, ಶಿಕ್ಷಣ ಸಂಸ್ಥೆಗಳಿಗೂ ಮತ್ತು ಪೋಷಕರಿಗೂ ಅಭಿನಂದನೆಗಳು.
ವಿಶೇಷವಾಗಿ ಹೆಣ್ಣು ಮಕ್ಕಳು ಹೆಚ್ಚಿನ ಅಂಕ ಪಡೆದು, ಫಲಿತಾಂಶದಲ್ಲಿ ಮೇಲುಗೈ ಸಾಧಿಸಿ ಈ ಬಾರಿ ವಿಶೇಷ ಸಾಧನೆ ಮಾಡಿದ್ದಾರೆ.ಎಲ್ಲಾ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ಈ ಫಲಿತಾಂಶ ಪ್ರೇರಣೆ ಆಗಲಿ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
