![]() |
| ರಾಮಾಂಜಿ |
ಉಡುಪಿ: ಕುಂದಾಪುರದ ಅಂತಾರಾಷ್ಟ್ರೀಯ ದುಡಿಯುವ ಮಕ್ಕಳ ಸಂಸ್ಥೆಯಾದ 'ನಮ್ಮ ಭೂಮಿ'ಯ ರಾಯಭಾರಿ , ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಭೂಮಿ ಕಲಾವಿದ ಹಾಗೂ ಕನ್ನಡ ಉಪನ್ಯಾಸಕ ರಾಮಾಂಜಿ ಅವರು ಏಕಾಂಗಿ ಹೋರಾಟಕ್ಕೆ ಇಳಿದಿದ್ದಾರೆ. " ವಿಶ್ವದ ಓರ್ವ ಸಂವೇದನಾಶೀಲ ಪ್ರಜೆಯಾಗಿ, ಕಳೆದ ಒಂದು ತಿಂಗಳಿನಿಂದ ನಡೆಯುತ್ತಾ ಬಂದಿರುವ ಯುದ್ಧ ಸಂಬಂಧಿ ಘಟನೆಗಳನ್ನು ನೋಡಿ ಮನನೊಂದು ಮಾನವ ಜನಾಂಗದ ಮೇಲೆ ನಡೆಯುತ್ತಿರುವ ಹಿಂಸೆಗಳಿಗೆ ಮತ್ತು ಪ್ರಕೃತಿಯ ಮೇಲೆ ಆಗುತ್ತಿರುವ ದಬ್ಬಾಳಿಕೆಗೆ ನೈತಿಕ ಪ್ರತಿಭಟನೆ ಮಾಡುತ್ತಿದ್ದೇನೆ. ಗಾಂಧಿ ಮಾದರಿಯಲ್ಲಿ ಒಂದು ದಿನದ ಮೌನ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಂಡಿದ್ದೇನೆ. ದಿನಾಂಕ : 11. 04.2026 ಶನಿವಾರದಂದು ಉಡುಪಿಯ ನಗರ ಭಾಗದಲ್ಲಿರುವ ಕ್ಲಾಕ್ ಟವರ್ ಮುಂಭಾಗದ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಾಂಕೇತಿಕ ಪ್ರತಿಭಟನೆ ಮಾಡಲಿದ್ದೇನೆ. ಬೆಳಿಗ್ಗೆ 8.30 ರಿಂದ ಸಂಜೆ 5:30ರ ವರೆಗೆ ಏಕಾಂಗಿಯಾಗಿ ಕುಳಿತು ಶಾಂತಿಯುತವಾಗಿ ಪ್ರತಿಭಟಿಸುತ್ತೇನೆ. ಈ ಮೂಲಕ ಜನಜಾಗೃತಿ ಮೂಡಿಸುವುದು ನನ್ನ ಉದ್ದೇಶವಾಗಿದೆ ಎಂದು ರಾಮಾಂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
