ಕುಂದಾಪುರ :
ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತು ಬಂದ ದೂರಿನ ಮೇರೆಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 26/2026 ಅಡಿಯಲ್ಲಿ ಕಲಂ 331(3), 305 BNS ರಂತೆ ಪ್ರಕರಣ ದಾಖಲಾಗಿದೆ.ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಂದೀಪ ಆಚಾರಿ (28), ಮತ್ತುಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ. ಇವರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸಲಾಗಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್, 3 ಮೊಬೈಲ್ ಫೋನ್‌ಗಳು ಹಾಗೂ ಕಳ್ಳತನಗೊಂಡ ಉಮಾಮಹೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಅಂದಾಜು ಮೌಲ್ಯ ರೂ. 1,50,000 ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
