![]() |
| ಸೋಮನಾಥ |
ಉಡುಪಿ : ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೋಮನಾಥ @ ಸೋಮು ( 40 ) ವನ್ನು ಗಡೀಪಾರು ಮಾಡಲಾಗಿದೆ. ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಗಡಿಪಾರು ಆದೇಶ ಹೊರಡಿಸಲಾಗಿದೆ.
ಈತನ ವಿರುದ್ಧ 11 ಪ್ರಕರಣ ದಾಖಲಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ.
ಈತನನ್ನು ಶಿವಮೊಗ್ಗ ಜಿಲ್ಲೆಯ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
