ಉಡುಪಿ: ಕ್ರಿಕೆಟ್‌ ಬೆಟ್ಟಿಂಗ್‌ ಆರೋಪಿ ಭರತ್‌ ಜಯರಾಮ್‌ ಗಡಿಪಾರು !

 

ಭರತ್ ಜಯರಾಮ್


ಉಡುಪಿ:ಕ್ರಿಕೆಟ್‌ ಬೆಟ್ಟಿಂಗ್‌ ಆರೋಪಿ ಭರತ್‌ ಜಯರಾಮ್‌  ( 34) ನನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ನಿವಾಸಿಯಾದ ಈತನ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ದಿನಾಂಕ 14.05.2026 ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ. 

ಈತನ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ನಡೆಸಿರುವ ಬಗ್ಗೆ 3 ಪ್ರಕರಣಗಳು ದಾಖಲಾಗಿರುತ್ತವೆ. ಈ ಪೈಕಿ 1 ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ. 

ಈತನನ್ನು ಬೆಂಗಳೂರು ಕಮಿಷನರೇಟ್‌ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.