ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ SIR Mapping (Special Intensive Revision Mapping) ಪ್ರಕ್ರಿಯೆಯು ಮತದಾರರ ಪಟ್ಟಿಯನ್ನು ನವೀಕರಿಸುವ ಮಹತ್ವದ ಕಾರ್ಯವಾಗಿದ್ದು, ಮಂಗಳೂರು ನಗರ ಜಿಲ್ಲೆಯ ಎಲ್ಲಾ ನಾಗರಿಕರು ಮೇ 11 ರೊಳಗೆ ಕಡ್ಡಾಯವಾಗಿ ತಮ್ಮ Mapping ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲೆ ಅಧ್ಯಕ್ಷೆ ಆಯಿಷಾ ಯಾಸ್ಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚಿನ ಮಾಹಿತಿಯ ಪ್ರಕಾರ Mapping ಮಾಡದಿರುವವರ ಪಟ್ಟಿಯಲ್ಲಿ ಮಹಿಳೆಯರ ಸಂಖ್ಯೆಯೇ ಅಧಿಕವಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಅನೇಕ ಮಹಿಳೆಯರು ತಮ್ಮ ಮತದಾರರ ಮಾಹಿತಿ ಪರಿಶೀಲನೆ ಹಾಗೂ ದಾಖಲೆ ನವೀಕರಣ ಮಾಡದೇ ಉಳಿದಿರುವ ಹಿನ್ನೆಲೆಯಲ್ಲಿ, ಮಹಿಳೆಯರು ವಿಶೇಷ ಜಾಗ್ರತೆ ವಹಿಸಿ ತಕ್ಷಣವೇ Mapping ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ ಎಂದು ಸಂಘಟನೆ ಮನವಿ ಮಾಡಿದೆ.
ಮತದಾನವು ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕಾಗಿದ್ದು, Mapping ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತದಾರರ ಪಟ್ಟಿಯಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಮನೆಮನೆಗಳಿಗೆ ಭೇಟಿ ನೀಡುವ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸುವುದರ ಜೊತೆಗೆ, ತಮ್ಮ ಕುಟುಂಬದ ಎಲ್ಲಾ ಸದಸ್ಯರ ಮಾಹಿತಿಯೂ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
ವಿಶೇಷವಾಗಿ ಮಹಿಳೆಯರು, ಯುವತಿಯರು ಹಾಗೂ ಹಿರಿಯ ನಾಗರಿಕರು ಈ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ಮೇ 11 ರೊಳಗೆ ಕಡ್ಡಾಯವಾಗಿ Mapping ಪೂರ್ಣಗೊಳಿಸಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲೆ ಪ್ರಕಟಣೆಯಲ್ಲಿ ತಿಳಿಸಿದೆ.
