ಮೇ 12 ರಂದು (ನಾಳೆ) ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ



ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧೀನ ದಲ್ಲಿ ಬರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಮೇ 12ಮಂಗಳವಾರ ಮಧ್ಯಾಹ್ನ 2.30  ಗಂಟೆಗೆ ಉಡುಪಿ ಅಜ್ಜರಕಾಡು ಟೌನ್ ಹಾಲ್ ಸಭಾಂಗಣದಲ್ಲಿ ಅಯೋಜಿಸಿರುವುದಾಗಿ ತಿಳಿಸಿದ್ದಾರೆ.

ಈ ಸಮಾರಂಭದಲ್ಲಿ  ಉಡುಪಿ ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲೆಯ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.