ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

 


ಜೈಪುರ: ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಟಿಎ ಇತ್ತೀಚಿನ ಹೇಳಿಕೆಯಲ್ಲಿ ತಿಳಿಸಿದೆ. ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

ಪಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿರುವುದರಿಂದ ಸರಕಾರ ಮಧ್ಯಪ್ರವೇಶಿಸಿ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ.

ಕಾನೂನು ಜಾರಿ ಸಂಸ್ಥೆಗಳ ಮಾಹಿತಿಗಳನ್ನು ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency) ತಿಳಿಸಿದೆ. ಈ ವರದಿಗಳು ಪರೀಕ್ಷಾ ಪ್ರಕ್ರಿಯೆಯಲ್ಲಿ ರಾಜಿ ಮಾಡಿಕೊಂಡಿರಬಹುದು ಎಂದು ತಿಳಿಸಿತ್ತು.