ಬೆಂಗಳೂರು:ಹಲವು ಗೊಂದಲಗಳ ನಡುವೆ ಕೊನೆಗೂ ಕರ್ನಾಟಕದ (Karnataka) ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಸಂಜೆ ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಸಿಎಂ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.
ತೈಲ ಬೆಲ ಏರಿಕೆ ಆಗಿರುವುದಿಂದ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಬೇಡ ಅಂತ ತೀರ್ಮಾನ ಮಾಡಲಾಗಿದೆ.
ವೃಶ್ಚಿಕ ಲಗ್ನದಲ್ಲಿ ಅಧಿಕಾರ ಸ್ವೀಕಾರ
ಈ ಮೊದಲು ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ದ್ವಾರಕನಾಥ್ ಗುರೂಜಿ ಅವರು ಜೂನ್ 5,6, ಹಾಗೂ 7 ತಾರೀಖು ನೀಡಿದ್ದರು. ಆದ್ರೆ, ಇದೀಗ ಜೂನ್ 3ರ ಸಂಜೆ 5:15ಕ್ಕೆ ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಮಾಣವಚನ ಸ್ವೀಕರಿಸಲು ಡಿಕೆ ಶಿವಕುಮಾರ್ ನಿರ್ಧರಿಸಿದ್ದರು. ಆದ್ರೆ, ಹೈಕಮಾಂಡ್ ಸೂಚನೆ ಮೇರೆಗೆ ಜೂನ್ 3ರಂದು ಸರಳವಾಗಿ ಲೋಕಭವನದ ಗ್ಲಾಸ್ ಹೌಸ್ ನಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧಾರವಾಗಿದೆ. ಸಾರ್ವಜನಿಕವಾಗಿ ತೊಂದರೆ ಆಗಬಾರದು ಎನ್ನುವ ದೃಷ್ಠಿಯಿಂದ ಆಡಂಬರದ ಕಾರ್ಯಕ್ರಮ ಬೇಡ ಎಂದು ತೀರ್ಮಾನಿಸಲಾಗಿದೆ.
