ಬೆಂಗಳೂರು: ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿಗಳ ಮಧ್ಯೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೇ 28 ರಂದು ಭೇಟಿಯಾಗಲು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರ ಅವರಿಂದ ಸಮಯ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಬುಧವಾರ ತಿಳಿಸಿವೆ.
ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ ಮುಂದಿನ ಸಿಎಂ ಆಗಲಿದ್ದಾರೆ ಎನ್ನುವ ವದಂತಿಗಳು ಹರಿದಾಡುತ್ತಿವೆ.
‘ರಾಜ್ಯಪಾಲರನ್ನು ಭೇಟಿಯಾಗಲು ನಾಳೆ ಸಮಯ ಕೇಳಿದ್ದಾರೆ’ ಎಂದು ಮುಖ್ಯಮಂತ್ರಿಯ ಆಪ್ತ ಮೂಲವೊಂದು ಪಿಟಿಐಗೆ ತಿಳಿಸಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಗೆಹಲೋತ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

