ಉಡುಪಿ: ದಾವಣಗೆರೆ , ಬಾಗಲಕೋಟೆ ಉಪಚುನಾವಣೆ ಗೆಲುವು- ಕಾಂಗ್ರೆಸ್ ನಿಂದ ಸಂಭ್ರಮಾಚರಣೆ



ಉಡುಪಿ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಪರವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ  ಸಂಭ್ರಮಿಸಲಾಯಿತು.ಈ ವೇಳೆ ಮಾತನಾಡಿದ ಪ್ರಖ್ಯಾತ್ ಶೆಟ್ಟಿ , ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿ ಅನುಷ್ಠಾನ ಮಾಡುವ ಮೂಲಕ ನುಡಿದಂತೆ ನಡೆದಿದೆ.ಈ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಕೈ ಬಲಪಡಿಸಿದ್ದಾರೆ.ಈ ಫಲಿತಾಂಶ 2028 ರ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ,ಲಕ್ಷ್ಮೀಶ್ ಶೆಟ್ಟಿ,ಸುರೇಂದ್ರ ಆಚಾರ್ಯ,ವಿಲ್ಸನ್,ಸೂರಜ್ ಕರ್ಕೇರ, ಯುವ ಕಾಂಗ್ರೆಸ್ ನ ಹಮ್ಮದ್, ಆಫ್ರಿದ್, ಅಕ್ಷಿತ್ ಪೈ, ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.