ಬೆಂಗಳೂರು : ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಮಧ್ಯಾಹ್ನ 2.20ರ ವೇಳೆಗೆ ಶೇ.100ರಷ್ಟು ಮತದಾನವಾಗಿದೆ. 222 ಮತಗಳು ಚಲಾವಣೆಯಾಗಿದ್ದು, ಚುನಾವಣೆ ಪ್ರಕ್ರಿಯೆ ಮುಗಿದಿದೆ.
ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಬಿಜೆಪಿ 2 ಹಾಗೂ ಜೆಡಿಎಸ್ 1 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆ ರಾಜಕೀಯವಾಗಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಅಡ್ಡಮತದಾನ ಮತ್ತು ಪಕ್ಷಾಂತರ ಚರ್ಚೆಗಳ ನಡುವೆ ಮತದಾನ ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ.ಫಲಿತಾಂಶ ಇಂದೇ ಘೋಷಣೆಯಾಗಲಿದೆ.
