ಬೆಂಗಳೂರು: 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿ-ಸಿಇಟಿ-26) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹ ಅಧ್ಯಕ್ಷರು, ವೈದ್ಯಕೀಯ ಶಿಕ್ಷಣ ಸಚಿವರೂ ಆದ ಡಾ. ಶರಣಪ್ರಕಾಶ ಆರ್. ಪಾಟೀಲ ಶನಿವಾರ (ಜೂನ್ 6) ಪ್ರಕಟಿಸಲಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬು ಗೋಯಲ್, ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಉಪಸ್ಥಿತರಿರುವರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಶನಿವಾರ, 6 ಜೂನ್, 2026
ಮಧ್ಯಾಹ್ನ 12:00 ಗಂಟೆ
ಕೆಇಎ ಕಚೇರಿ, 18ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು
