ಉಡುಪಿ: ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಜೂನ್ 12 ಕೊಲ್ಲೂರು ಭೇಟಿ ಹಿನ್ನೆಲೆ: ಬಿಗಿ ಪೊಲೀಸ್ ಬಂದೋಬಸ್ತ್

 


ಉಡುಪಿ:  ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್  ಜೂನ್ 12 ರಂದು ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ.



ಮುಖ್ಯಮಂತ್ರಿ ಸಂಚರಿಸುವ ಮಾರ್ಗದುದ್ದಕ್ಕೂ ಹಾಗೂ ದೇವಸ್ಥಾನದ ಸುತ್ತಮುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಇರಲಿದೆ. ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕರಲ್ಲಿ ಈ ಕೆಳಗಿನಂತೆ ವಿನಂತಿಯನ್ನು ಪೊಲೀಸರು ಮಾಡಿದ್ದಾರೆ.

ಮುಖ್ಯಮಂತ್ರಿಗಳು ದೇವಸ್ಥಾನ ಭೇಟಿ ಮಾಡಿ ಹಿಂದಿರುಗಲಿದ್ದು ಯಾವುದೇ ಸಾರ್ವಜನಿಕ ಭೇಟಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದಿಲ್ಲ.

ವಿ.ವಿ.ಐ.ಪಿ ಅವರ ವಾಹನ ಸಂಚಾರದ (ಕಾನ್ವಾಯ್) ಹಾದಿ, ಪ್ರವೇಶ - ದ್ವಾರಗಳು ಅಥವಾ ದೇವಸ್ಥಾನದ ಆವರಣದಲ್ಲಿ ಗುಂಪು ಸೇರುವುದಾಗಲಿ ಅಥವಾ ಜನಸಂದಣಿ ಮಾಡಬಾರದು.

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಬಂದೋಬಸ್ತ್ ಇರುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುವ ಸಂಭವವಿರುವುದರಿಂದ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5:00 ವರೆಗೆ ಭಕ್ತಾದಿಗಳು ದೇವಸ್ಥಾನದ ದರ್ಶನ ತಪ್ಪಿಸುವುದು ಸೂಕ್ತವಾಗಿರುತ್ತದೆ.

ಯಾವುದೇ ಅನಾನುಕೂಲತೆಯನ್ನು ತಪ್ಪಿಸಲು ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿಗಳ ಸೂಚನೆಗಳಿಗೆ ಸಂಪೂರ್ಣವಾಗಿ ಸಹಕರಿಸಿ.

ವಿಶೇಷ ಸೂಚನೆ : ಭಕ್ತಾದಿಗಳಿಗೆ ಯಾವುದೇ ಸಮಯದಲ್ಲಿ ದೇವಸ್ಥಾನ ಪ್ರವೇಶ ನಿಷೇಧವಿಲ್ಲ. ಆದರೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ದರ್ಶನಕ್ಕೆ ಅನಾನುಕೂಲವಾಗಬಹುದು ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.