ಮಂಗಳೂರು: ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಅವರು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
2010 ರಲ್ಲಿ ದ.ಕ. ಜಿಲ್ಲಾ ಖಾಝಿಯಾಗಿ ಅಧಿಕಾರ ಸ್ವೀಕರಿಸಿದ್ದ ತ್ವಾಕಾ ಉಸ್ತಾದ್, ದ.ಕ. ಮತ್ತು ಕೇರಳ ರಾಜ್ಯದ ಸುಮಾರು 200ಕ್ಕೂ ಅಧಿಕ ಜಮಾಅತ್ ಗಳ ಖಾಝಿಯಾಗಿದ್ದರು. ಸಮಸ್ತ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
