ಉಡುಪಿ: ಮಾದಕ ವಸ್ತು M.D.M.A ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ ಸೊತ್ತು ವಶ

 


ಉಡುಪಿ : ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ ಹೊಂದಿದ್ದ ಹಾಗೂ ಕಾಪು, ಬ್ರಹ್ಮಾವರ, ಉಡುಪಿ, ಮಣಿಪಾಲದಲ್ಲಿರುವ ಕಾಲೇಜು ವಿಧ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಸೈಯ್ಯದ್‌ ಮೊಹಮ್ಮದ್‌ ಮೆಹರಾಜ್‌  (19 ) ನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ 01 ಗ್ರಾಂ 03 ಮಿಲಿ ಗ್ರಾಂ ತೂಕದ ಎಂ.ಡಿ.ಎಂ.ಎ,  ಎಂ.ಡಿ.ಎಂ.ಎ ಸಾಗಾಟಕ್ಕೆ ಬಳಸಿದ ಸ್ಕೂಟರ್  ಹಾಗೂ ಇತರೇ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 68/2026 ಕಲಂ 8(C)̧ 22(b) NDPS ACT  1985 ರಂತೆ ಪ್ರಕರಣ ದಾಖಲಾಗಿದೆ.



ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.