ಖಾಸಗಿ ಜೆಟ್ ಖರೀದಿಸಿದ MRG ಗ್ರೂಪ್ ನ ಪ್ರಕಾಶ್ ಶೆಟ್ಟಿ




ಮಂಗಳೂರು: ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು  ಅಮೆರಿಕದಿಂದ ತರಿಸಲಾದ 14 ಆಸನಗಳ Embraer Legacy 650 ಖಾಸಗಿ ವಿಮಾನವನ್ನು ಎಂಆರ್‌ಜಿ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು.



ಇತ್ತೀಚೆಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಈ ಹೊಸ ವಿಮಾನಕ್ಕೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಪೂಜೆ ನೆರವೇರಿಸಿ, ಆಶೀರ್ವಾದ ಪಡೆಯಲಾಯಿತು. ಈ ಸಂಭ್ರಮದ ಕ್ಷಣಕ್ಕೆ ಪ್ರಕಾಶ್ ಶೆಟ್ಟಿ ಅವರ ಕುಟುಂಬ ಸದಸ್ಯರು ಹಾಗೂ ಆಪ್ತರು ಸಾಕ್ಷಿಯಾದರು.



ಆತಿಥ್ಯ, ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಎಂಆರ್‌ಜಿ ಸಮೂಹವನ್ನು ಪರಿಶ್ರಮ ಹಾಗೂ ದೂರದೃಷ್ಟಿಯೊಂದಿಗೆ ಬೆಳೆಸಿದ ಡಾ. ಪ್ರಕಾಶ್‌ ಶೆಟ್ಟಿ ಅವರು ಉದ್ಯಮ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಗಳು ಮತ್ತು ದಾನಧರ್ಮಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.ಅಂದಹಾಗೆ ಜೆಟ್ ನ ಬೆಲೆ 190 ಕೋಟಿ ಎನ್ನಲಾಗಿದೆ.