ಅನಾರೋಗ್ಯದಿಂದ ಯುವಕ ಮೃತ್ಯು

 


ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಸಾಲಿಗ್ರಾಮ ಚಿತ್ರಪಾಡಿ ಗ್ರಾಮದ ನಿವಾಸಿ ಕಾರ್ತಿಕ ಅಡಿಗ (33) ಎಂದು ಗುರುತಿಸಲಾಗಿದೆ. 



 ಇವರು ಕಳೆದ ಸುಮಾರು ಎರಡು ತಿಂಗಳಿನಿಂದ ಜ್ವರ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದು, ಈ ಸಂಬಂಧ ವಿನಯ ಆಸ್ಪತ್ರೆ ಮತ್ತು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೇ 30ರಂದು ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಮೃತಪಟ್ಟಿದ್ದಾರೆ.

ಈ ಸಂಬಂಧ ಮೃತರ ಸಂಬಂಧಿಕ ಎಸ್. ಶ್ರೀನಿವಾಸ ಅಡಿಗ ನೀಡಿದ ಮಾಹಿತಿಯಂತೆ ಕೋಟ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.