ಉಡುಪಿ: ಬಸ್ಸು ನಿಲ್ದಾಣದಲ್ಲಿ ಕುಸಿದುಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

 


ಉಡುಪಿ: ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಕುಸಿದುಬಿದ್ದಿದ್ದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಸಾರ್ವಜನಿಕರ ಸಹಕಾರದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಮಂಗಳವಾರ ದಾಖಲಿಸಿದ್ದರು. ರೋಗಿ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಮೃತ ವ್ಯಕ್ತಿಯು ಸರ್ವಿಸ್ ಬಸ್ಸು ನಿಲ್ದಾಣದಲ್ಲಿ  ಊರುಗೋಲಿನ ನೆರವಿನಿಂದ ನಡೆದು ಸಾಗುತ್ತಿದ್ದಾಗ ಕುಸಿದುಬಿದ್ದಿದ್ದರು. ಗಾಯಾಳುವನ್ನು ಮೂಡುಬೆಳ್ಳೆಯ ಮಾರ್ಟಿನ್ (58) ಎಂದು‌ ಗುರುತಿಸಲಾಗಿದೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ವಾರಸುದಾರರು ಜಿಲ್ಲಾಸ್ಪತ್ರೆಯ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.