ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ಸರಹದ್ದಿನ ರೌಡಿ ಚರಣ್ ರಾಜ್ ( 29) ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.
ಈತನ ವಿರುದ್ದ ಬಂಟ್ವಾಳ ಗ್ರಾಮಾಂತರ, ಸುರತ್ಕಲ್, ಮಂಗಳೂರು ಪೂರ್ವ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ, ಮಾದಕ ದ್ರವ್ಯ ಸೇವನೆ, ಮಾದಕ ದ್ರವ್ಯ ಸಾಗಾಟ, ಎಸ್.ಸಿ./ಎಸ್.ಟಿ. ಕಾಯ್ದೆ ಸಹಿತ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತವೆ. ಅವುಗಳ ಪೈಕಿ 03 ಪ್ರಕರಣಗಳಲ್ಲಿ ಶಿಕ್ಷೆ, 02 ಪ್ರಕರಣಗಳ್ಲಿ ಖುಲಾಸೆ, 04 ಪ್ರಕರಣ ನ್ಯಾಯಾಂಗ ವಿಚಾರಣೆ ಹಾಗೂ ಉಳಿದ 01 ಪ್ರಕರಣ ತನಿಖೆಯಲ್ಲಿವೆ.
ಬಂಧಿತ ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
