ಉಡುಪಿ: ಕಿದಿಯೂರು ಲಾರ್ಡ್ಸ್ ಇಂಟರ್ ನ್ಯಾಷನಲ್ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಬಿಜೆಪಿ ಮುಖಂಡೆ ಗೀತಾಂಜಲಿ ಸುವರ್ಣ ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪ್ರಾಂಶುಪಾಲೆ ಶರೋನ್ ಕುಂದರ್ ಉಪಪ್ರಾಂಶುಪಾಲ ಕಿರಣ್ ಕುಮಾರ್ ,ಸಂಸ್ಥೆಯ ಅಧ್ಯಕ್ಷ ಭುವನೇಂದ್ರ ಕಿದಿಯೂರು ,ಖಜಾಂಜಿ ಡಾ.ಭಾಗ್ಯ ಶ್ರೀ ಕಿದಿಯೂರು , ಫಝೀಮ್ ಫರ್ಹೀನ್ , ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

