ಶಿರ್ವ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಉಡುಪಿ, ಮೊಬೈಲ್ ನೇತ್ರ ಚಿಕಿತ್ಸಾ ಘಟಕ, ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ಜೈಂಟ್ಸ್ ಗ್ರೂಪ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶಿರ್ವದ ವೈಷ್ಣವಿ ನಾರಾಯಣಿ ದೇವಸ್ಥಾನದ ಸಮೀಪ ಇಂದು ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಆಸ್ಪತ್ರೆಯ ಡಾ. ವಿಠ್ಯಾನಂದ ನಾಯಕ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಡಾ. ಗಾಯತ್ರಿ, ಜೈಂಟ್ಸ್ ಫೆಡರೇಶನ್‌ನ ಕೇಂದ್ರ ಸಮಿತಿಯ ಸದಸ್ಯ ದಿನಕರ ಅಮೀನ್, ಜೈಂಟ್ಸ್ ಗ್ರೂಪ್ ಉಡುಪಿಯ ಅಧ್ಯಕ್ಷ ವಿನಯ್ ಕುಮಾರ್ ಪೂಜಾರಿ, ಶಿರ್ವ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಶೆಣೈ ಹಾಗೂ ಶಿರ್ವ ಜಿಎಸ್‌ಬಿ ಸಮಾಜದ ಅಧ್ಯಕ್ಷ ಶ್ರೀನಿವಾಸ ಶೆಣೈ ಉಪಸ್ಥಿತರಿದ್ದರು.
ಡಾ. ನಿತ್ಯಾನಂದ ನಾಯಕ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ವಾದಿರಾಜ್ ಸಾಲ್ಯಾನ್ ಅವರು ಸಭೆಯನ್ನು ಸ್ವಾಗತಿಸಿದರು. ಎಂ. ಇಕ್ಬಾಲ್ ಮನ್ನಾ ಅವರು ವಂದನಾರ್ಪಣೆ ಸಲ್ಲಿಸಿದರು. ದಯಾನಂದ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

