ನ್ಯಾಯಾಲಯಕ್ಕೆ ನಾಲ್ಕನೇ ಬಾರಿಗೆ ಹುಸಿ ಬಾಂಬ್ ಬೆದರಿಕೆ: ನ್ಯಾಯವಾದಿ ಹಬೀಬ್ ಅಲಿ ಖಂಡನೆ


 

ಉಡುಪಿ ಮಾನ್ಯ ನ್ಯಾಯಾಲಯಕ್ಕೆ ನಾಲ್ಕನೇ ಬಾರಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಘಟನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯವಾದಿ ಶ್ರೀ ಹಬೀಬ್ ಅಲಿ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯದಂತಹ ಸಂವಿಧಾನಾತ್ಮಕ ಸಂಸ್ಥೆಗಳಿಗೆ ಈ ರೀತಿಯ ಪದೇ ಪದೇ ಹುಸಿ ಬೆದರಿಕೆಗಳನ್ನು ನೀಡುವುದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದರ ಜೊತೆಗೆ ಸಾರ್ವಜನಿಕರಲ್ಲಿ ಹಾಗೂ ವಕೀಲರಲ್ಲಿ ಆತಂಕ ಉಂಟುಮಾಡುತ್ತದೆ. ಇಂತಹ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಪೊಲೀಸರು ಶೀಘ್ರವಾಗಿ ಪತ್ತೆಹಚ್ಚಿ, ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇಂತಹ ಘಟನೆಗಳು ಮರುಕಳಿಸದಂತೆ ನ್ಯಾಯಾಲಯಗಳ ಭದ್ರತೆಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ಮಾನ್ಯ ಗ್ರಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹಾಗೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.