ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ನೂತನ ಸಿಎಂ ಡಿಕೆಶಿ

 




ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ  ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಇಂದು ಸಂಜೆ ವಿಧಾನಸೌಧದಲ್ಲಿ ನಡೆದ ತಮ್ಮ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದರು.

ರಾಜ್ಯದಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಂತೆ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ನೀಡಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶೀಘ್ರದಲ್ಲೇ ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಕರೆಯಲಾಗುವುದು ಎಂದರು.