ಇರಾನ್-ಅಮೆರಿಕ ಶಾಂತಿ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

 


ಅಮೆರಿಕ ಮತ್ತು ಇರಾನ್ ನಡುವೆ ತಾತ್ಕಾಲಿಕ ಶಾಂತಿ ಒಪ್ಪಂದ ಏರ್ಪಟ್ಟಿದ್ದು, ಇದಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. 

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಫ್ರಾನ್ಸ್‌ನಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ.ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕ-ಇರಾನ್ ಒಪ್ಪಂದದ ಮುದ್ರಿತ ಪ್ರತಿಗೆ ಅಧಿಕೃತವಾಗಿ ಸಹಿ ಹಾಕಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಊಟದ ಮೇಜಿನ ಬಳಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಸಹಿ ಹಾಕುವ ವೀಡಿಯೊವನ್ನು ಶ್ವೇತಭವನ ಪ್ರಕಟಿಸಿದೆ. ಇದೊಂದು ತಾತ್ಕಾಲಿಕ ಒಪ್ಪಂದವಷ್ಟೇ. ಇರಾನ್ ಸರಿಯಾಗಿ ನಡೆದುಕೊಳ್ಳದಿದ್ದರೆ ಮತ್ತೆ ದಾಳಿ ನಡೆಸುತ್ತೇವೆ. ಇರಾನ್ ಅಣ್ವಸ್ತ್ರ ಪಡೆಯಲು ಪ್ರಯತ್ನಿಸಿದರೆ ನರಕ ದರ್ಶನವಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ನಿನ್ನೆಯೇ ಎಚ್ಚರಿಕೆ ನೀಡಿದ್ದರು.ಇರಾನ್ ನಮ್ಮ ಮಾತು ಕೇಳದಿದ್ದರೆ ಮತ್ತೆ ಯುದ್ಧ ಶುರು ಮಾಡ್ತೀವಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಇರಾನ್ ಜೊತೆ ಮಾಡಿಕೊಳ್ಳುತ್ತಿರುವುದು ಅಂತಿಮ ಒಪ್ಪಂದವಲ್ಲ, ಇದೊಂದು ತಿಳುವಳಿಕಾ ಪತ್ರವಷ್ಟೇ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಫ್ರಾನ್ಸ್‌ನ ಎವಿಯಾನ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ವೇಳೆ ಈಜಿಪ್ಟ್ ಜೊತೆಗಿನ ದ್ವಿಪಕ್ಷೀಯ ಮಾತುಕತೆ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ತಿಂಗಳುಗಳಿಂದ ನಡೆಯುತ್ತಿದ್ದ ಸಂಘರ್ಷಕ್ಕೆ ಅಂತ್ಯ ಹಾಡಲು ಅಮೆರಿಕ ಮತ್ತು ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ಕೇವಲ 48 ಗಂಟೆಗಳು ಬಾಕಿ ಇರುವಾಗ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.