SIR : ಜುಲೈ 10 : ಉಡುಪಿ ಜಿಲ್ಲಾಧಿಕಾರಿ ಜೊತೆ ಮಾಧ್ಯಮ ಸಂವಾದ


 

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಎಸ್‌ಐಆರ್(ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಕುರಿತು ಸಂವಾದ ಕಾರ್ಯಕ್ರಮವನ್ನು ಜು.10 ರಂದು ಮಂಗಳವಾರ ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.

ಇದರಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭಾಗವಹಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಲಿರುವರು. ಒಂದು ಗಂಟೆಗಳ ಕಾಲ ನಡೆಯುವ ಈ ಸಂವಾದ ಕಾರ್ಯಕ್ರಮದಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ತಿಳಿಸಿದ್ದಾರೆ.