ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ಕು. ಫಾತಿಮ ಶಿಝಾ ಅಲಿ ಅವರು ವಿಜ್ ಇಂಟರ್‌ನ್ಯಾಷನಲ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಸ್ಪೆಲ್ ಬಿ ಸ್ಪರ್ಧೆಯಲ್ಲಿ 14ನೇ ರ್ಯಾಂಕ್ ಪಡೆದು ಶಾಲೆಗೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಇವರು ಕಾಂಗ್ರೆಸ್ ಮುಖಂಡರು ಹಾಗೂ ಹಿರಿಯ ನ್ಯಾಯವಾದಿ ಶ್ರೀ ಹಬೀಬ್ ಅಲಿ ಮತ್ತು ಉಡುಪಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಫರ್ಝನಾ ಎಂ. ಅವರ ಪುತ್ರಿಯಾಗಿದ್ದಾರೆ.
