ನವದೆಹಲಿ: ಧರ್ಮಸ್ಥಳದ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.
‘ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಹಾಗೂ ಪ್ರಕರಣದಿಂದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಬೇಕು’ ಎಂದು ಕೋರಲಾಗಿದ್ದ ಪ್ರತ್ಯೇಕ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಸುಪ‍್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರೀಯ ತನಿಖಾ ದಳವನ್ನು (ಸಿಬಿಐ) ತರಾಟೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಹೋಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.ಪ್ರಕರಣದ ಮರು ತನಿಖೆ ಸುಪ್ರೀಂ ಕೋರ್ಟ್ ಆದೇಶಿಸುವ ಸಾಧ್ಯತೆ ಇದೆ.
