ವಸಂತ ಗಿಳಿಯಾರ್ ವಿರುದ್ಧ ಅರೆಸ್ಟ್ ವಾರಂಟ್


 

ಉಡುಪಿ: ಪತ್ರಕರ್ತ ,ಸಾಮಾಜಿಕ ಕಾರ್ಯಕರ್ತ ವಸಂತ ಗಿಳಿಯಾರ್ ಅವರ ವಿರುದ್ಧ ಬಂಧನದ ವಾರಂಟ್ ಜಾರಿಯಾಗಿದೆ.​ಫೇಸ್‌ಬುಕ್‌ನಲ್ಲಿ "ಬೆಳ್ತಂಗಡಿ ಕ್ಷೇತ್ರದಲ್ಲಿ ಸೋತವರ ಆಶ್ರಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ" ಎಂದು ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್.ಐ.ಆರ್. (FIR) ದಾಖಲಾಗಿತ್ತು. ಈ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮೂರು ಬಾರಿ ನೋಟೀಸ್ ನೀಡಿದ್ದರೂ, ವಸಂತ ಗಿಳಿಯಾರ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಈಗ ಬಂಧನ ವಾರಂಟ್ ಹೊರಡಿಸಲಾಗಿದೆ. 

ಕೆ. ಎಂ. ನಾಗೇಶ್ ಕುಮಾರ್ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ.