ಉಡುಪಿ: ಮಟ್ಕಾ ಆರೋಪಿ ರಾಮರಾಜ್‌ @ ರಮೇಶ ಅರಸ್‌ ಗಡಿಪಾರು !


 

ಉಡುಪಿ: ಉಡುಪಿಯ ಮಟ್ಕಾ ಆರೋಪಿ ರಾಮರಾಜ್‌ @ ರಮೇಶ ಅರಸ್‌, (48 ) ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಆರೋಪಿಯ ವಿರುದ್ದ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು 5 ಪ್ರಕರಣಗಳು ದಾಖಲಾಗಿರುತ್ತವೆ. ಅವುಗಳಲ್ಲಿ 4 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು, ಉಳಿದ 1 ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಾಮರಾಜ್‌ @ ರಮೇಶ ಅರಸ್‌ ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.