ಶಾಲಾ ಬಸ್ ಅಪಘಾತದಿಂದ ಗಾಯಗೊಂಡ ವಿದ್ಯಾರ್ಥಿನಿಯ ಯೋಗಕ್ಷೇಮ ವಿಚಾರಿಸಿದ ಕಾಂಗ್ರೆಸ್ ನಿಯೋಗ



ಮಣಿಪಾಲ: ಕ್ರೈಸ್ಟ್ ಸ್ಕೂಲ್, ಮಣಿಪಾಲ ಇದರ ಶಾಲಾ ಬಸ್ ಇಂದು ಹೆರ್ಗ ಗ್ರಾಮದ ಸರಳೇಬೆಟ್ಟು ಕೊಡಂಗಯಲ್ಲಿ ಶಾಲೆಯ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗಿತ್ತಿರುವ ಸಂದರ್ಭದಲ್ಲಿ ಮಳೆಯ ಕಾರಣ ಮಣ್ಣು ಕುಸಿದು ಬಸ್ ಅಪಘಾತಕ್ಕೀಡಾಗಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರ ಆರೋಗ್ಯವನ್ನು ವಿಚಾರಿಸಲು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ತೆರಳಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಭೇಟಿಯಾಗಿ ವೈದ್ಯರೊಂದಿಗೆ ಅವಳ ಆರೋಗ್ಯದ ಬಗ್ಗೆ ವಿಚಾರಿಸಿ ಆ ಪುಟ್ಟ ಬಾಲಕಿ ಹಾಗೂ ಅವಳ ಪೋಷಕರಿಗೆ ಧೈರ್ಯ ತುಂಬಿ ನಂತರ ಕ್ರೈಸ್ಟ್ ಸ್ಕೂಲ್‌ಗೆ ಭೇಟಿ ನೀಡಿ ಅಲ್ಲಿನ ಮುಖ್ಯೋಪಾಧ್ಯಾಯಿನಿಯನ್ನು ಭೇಟಿಯಾಗಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಲಾಯಿತು.



ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸುಕೇಶ್ ಕುಂದರ್ ಮತ್ತು ಶರತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಹಾಗೂ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ ಅವರು ಉಪಸ್ಥಿತರಿದ್ದರು.