ದಕ್ಷಿಣದ ಗಾನ ಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ನಿಧನ


 

ಮೈಸೂರು: ದಕ್ಷಿಣ ಭಾರತದ ಗಾನಕೋಗಿಲೆ, ಖ್ಯಾತ ಗಾಯಕಿ ಎಸ್. ಜಾನಕಿ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. 88 ವರ್ಷ ವಯಸ್ಸಿನವರಾಗಿದ್ದ ಅವರು, 17 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿ, ಆರು ದಶಕಗಳ ಕಾಲ ಸಂಗೀತ ಲೋಕವನ್ನು ಆಳಿದ್ದರು.

ಎಸ್‌.ಜಾನಕಿ ಅವರಿಗೆ ಈವರೆಗೂ ನಾಲ್ಕು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿವಿಧ ರಾಜ್ಯಗಳಿಂದ 33 ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬಹುಮುಖ ಪ್ರತಿಭೆಯ ಗಾಯಕಿಯಾಗಿ ವ್ಯಾಪಕವಾಗಿ ಅವರು ಮೆಚ್ಚುಗೆ ಪಡೆದಿದ್ದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಸಂಗೀತ ನಿರ್ದೇಶಕ ಇಳಯರಾಜ ಅವರೊಂದಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದರು. 1960, 1970 ಮತ್ತು 1980 ರ ದಶಕಗಳಲ್ಲಿ ಪಿ.ಬಿ. ಶ್ರೀನಿವಾಸ್ , ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಡಾ. ರಾಜ್‌ಕುಮಾರ್ ಜೊತೆಗೆ ಆಪ್ತ ಒಡನಾಟ ಹೊಂದಿದ್ದರು. ಹೆಚ್ಚೂಕಡಿಮೆ ಡಾ.ರಾಜ್‌ಕುಮಾರ್‌ ಅವರ ಎಲ್ಲಾ ಚಿತ್ರಗಳಲ್ಲೂ ಎಸ್‌.ಜಾನಕಿ ಅವರ ದನಿ ಇರುತ್ತಿತ್ತು. ಇತ್ತೀಚೆಗೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದ ಎಸ್‌.ಜಾನಕಿ, ವೀಲ್‌ಚೇರ್‌ನಲ್ಲಿ ಓಡಾಡುತ್ತಿದ್ದರು.