ಕುಂದಾಪುರದಲ್ಲಿ ಉದ್ಯಮಿಗೆ ಗುಂಡಿಕ್ಕಿ ಹತ್ಯೆ


 

ಕುಂದಾಪುರ: ಕುಂದಾಪುರದ ಚರ್ಚ್ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆಗೈದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದೆ.

ಮೃತರನ್ನು ಐವನ್ ರಿಚಾರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.