ಶಾಸಕ ಯಶಪಾಲ್ ಸುವರ್ಣ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಯಶಪಾಲ್ ಸುವರ್ಣ ಕಚೇರಿಗೆ ಮುತ್ತಿಗೆ ಹಾಗೂ ಪ್ರತಿಭಟನೆ




ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯ ವೇಳೆ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಅವರು ಬಳಸಿದ ಕೀಳುಮಟ್ಟದ ಹಾಗೂ ಅವಹೇಳನಕಾರಿ ಭಾಷೆಯನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ಈ ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡವಳಿಕೆಯನ್ನು ಖಂಡಿಸಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇಂದು ಬೆಳಿಗ್ಗೆ 12 ಗಂಟೆಗೆ ಜೋಡುಕಟ್ಟೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಶಾಸಕ ಯಶಪಾಲ್ ಸುವರ್ಣ ಅವರ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳಿಗೆ ಹಾಗೂ ವೈಚಾರಿಕ ಸೈದ್ಧಾಂತಿಕ ಹೋರಾಟಗಳಿಗೆ ಅವಕಾಶವಿದೆ. ಆದರೆ ವೈಯಕ್ತಿಕ ನಿಂದನೆ ಮತ್ತು ಕೀಳುಮಟ್ಟದ ಭಾಷೆಗೆ ಯಾವುದೇ ಸ್ಥಾನವಿಲ್ಲ. ಕಾಂಗ್ರೆಸ್ ಪಕ್ಷವು ತನ್ನ ನಾಯಕರ ಗೌರವ ಹಾಗೂ ಸ್ವಾಭಿಮಾನವನ್ನು ಕಾಪಾಡಲು ಕಾನೂನಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಿದೆ.

ಸ್ಥಳ: ಜೋಡುಕಟ್ಟೆ, ಉಡುಪಿ

ಸಮಯ: ಬೆಳಿಗ್ಗೆ 12 ಗಂಟೆ



ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ