ಉಡುಪಿ: ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಯುವಕ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

 
ಮಣಿಪಾಲ: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಿವಮೊಗ್ಗದ ಬಸವರಾಜ (25) ಆತ್ಮಹತ್ಯೆ ಮಾಡಿಕೊಂಡ ಯುವಕ.ಈತ  ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಕಾರು ಪಾರ್ಕಿಂಗ್ ಶೆಡ್ ಒಂದರಲ್ಲಿ ಕಬ್ಬಿಣದ ರಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೃತರ ಅಕ್ಕ ಸುಮಿತ್ರಾ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.