ಕೊಲ್ಲೂರು:ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ

 


ಕೊಲ್ಲೂರು: ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಸಿದರು. ದೇವಾಲಯದಲ್ಲಿ ಕೆಲಕಾಲ ಕಾಲ ಕಳೆದು ಆಶೀರ್ವಾದ ಪಡೆದರು.

ವಿ.ಡಿ. ಸತೀಶನ್ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, Z-ಪ್ಲಸ್ ಭದ್ರತೆ ಒದಗಿಸಲಾಗಿತ್ತು.



ಪೂಜೆ ಬಳಿಕ ಅವರು ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಶ್ರೀ ಮೂಕಾಂಬಿಕಾ ದೇವಿಯ ಅಪಾರ ಭಕ್ತರಾಗಿರುವ ಸತೀಶನ್ ಅವರಿಗೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.