ಉಪ್ಪೂರು ಬಳಿ ಖಾಸಗಿ ಬಸ್ ಬೆಂಕಿಗಾಹುತಿ



ಉಡುಪಿ: ಗುರುವಾರ, ಬೆಳಿಗ್ಗೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ವೊಂದು ಪ್ರಯಾಣದ ಮಧ್ಯೆಯೇ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಉಪ್ಪೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ಸಂಭವಿಸಿದೆ.

ಬಸ್‌ ಉಡುಪಿಯಿಂದ ಶಿವಮೊಗ್ಗಕ್ಕೆ ತನ್ನ ಎಂದಿನ ಸಂಚಾರದಲ್ಲಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.