ರಾಜ್ಯದಲ್ಲಿ1.07 ಕೋಟಿ ಮತದಾರರ ಹೆಸರು ಡಿಲೀಟ್! ಕರಡು ಮತದಾರರ ಪಟ್ಟಿ ಪ್ರಕಟ


 

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಮುಖ್ಯ ಚುನಾವಣಾಧಿಕಾರಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿಗಳನ್ನು ನೀಡಿದ್ದಾರೆ.

SIR ಪ್ರಕ್ರಿಯೆಯ ಭಾಗವಾಗಿ ರಾಜ್ಯದ ಮತದಾರರ ಪಟ್ಟಿಯಲ್ಲಿ ಪರಿಶೀಲನೆ ನಡೆಸಲಾಗಿದ್ದು, ಒಟ್ಟು 1,07,96,339 ಮತದಾರರ ಹೆಸರುಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರ ಹೆಸರುಗಳು ಕೈತಪ್ಪದಂತೆ ಹಾಗೂ ಅನರ್ಹ ಹೆಸರುಗಳನ್ನು ಗುರುತಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಹಲವು ಹಂತಗಳಲ್ಲಿ ಪರಿಶೀಲನೆ ನಡೆಸುತ್ತಿದೆ.

ಮತದಾರರ ಪಟ್ಟಿಯಲ್ಲಿನ ಹೆಸರುಗಳ ಕುರಿತು ಸಾರ್ವಜನಿಕರು ಆತಂಕಪಡಬೇಕಾಗಿಲ್ಲ. ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಲ್ಲಿ ಉಳಿಸುವುದು ಹಾಗೂ ಅಗತ್ಯವಿದ್ದಲ್ಲಿ ಸೂಕ್ತ ಪ್ರಕ್ರಿಯೆ ಮೂಲಕ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.