ಆಗಸ್ಟ್ 13 ರಂದು ಕರ್ನಾಟಕ ಬಂದ್ !

 


ಬೆಂಗಳೂರು: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಹಾಗೂ ತಮಿಳುನಾಡು ಸರ್ಕಾರದ ಧೋರಣೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಆಗಸ್ಟ್ 13ರಂದು 'ಕರ್ನಾಟಕ ಬಂದ್'ಗೆ ಕರೆ ನೀಡಿವೆ. ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾತನಾಡಿದ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಬಂದ್ ನಡೆಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಗಸ್ಟ್ 13ರ ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ನಡೆಯಲಿದೆ. ಬಂದ್‌ ಯಶಸ್ವಿಗೊಳಿಸಲು ನಾಳೆಯಿಂದಲೇ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ. ಆಗಸ್ಟ್ 11 ರಂದು ಹುಬ್ಬಳ್ಳಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡಲಾಗುವುದು, ನಾಳೆ ಬೆಳಗ್ಗೆ ಅತ್ತಿಬೆಲೆಯಲ್ಲಿ ಪ್ರತಿಭಟನೆ ಮಾಡ್ತೀವಿ. ಬೆಳಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ಕರ್ನಾಟಕ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 13ರಂದು ಕರ್ನಾಟಕ ಬಂದ್ ಯಶಸ್ವಿಯಾಗಿ ನಡೆಯಲಿದೆ. ರಾಜ್ಯ ಸರ್ಕಾರ ನೀರು ಬಂದಿದೆ ಅಂತಾ ಹೇಳಬಹುದು. ನೀರು ಹೋಗಿದೆ ಅಂದ್ರೂ ಹೋರಾಟ ನಿಲ್ಲಲ್ಲ. ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಮಾಡ್ತಿದೆ. ಈ ವಿಚಾರಕ್ಕೆ ನಮ್ಮ ಹೋರಾಟ ನಡೆಯಲಿದೆ.ಮೇಕೆದಾಟು ಯೋಜನೆ ಆಗಬೇಕು, ಆಗ ನೀರು‌ ವ್ಯರ್ಥ ಆಗೋದಿಲ್ಲ. ಹೀಗಾಗಿ ನಾಳೆ ಅತ್ತಿಬೆಲೆ ಟೋಲ್ ಗೇಟ್ ಬಂದ್ ಆಗುತ್ತೆ. ಆಗಸ್ಟ್ 11 ರಂದು ಹುಬ್ಬಳ್ಳಿಯಲ್ಲಿ ಚಳವಳಿ ಮಾಡ್ತೇವೆ. ಆಗಸ್ಟ್ 13 ರಂದು ಕರ್ನಾಟಕ ಸಂಪೂರ್ಣ ಬಂದ್ ಎಂದು ಎಚ್ಚರಿಕೆ ನೀಡಿದ್ದಾರೆ.