ಉಡುಪಿ: ಭಾರೀ ಮಳೆ- ಆಗಸ್ಟ್ 4 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಿಗೆ ರಜೆ ಘೋಷಣೆ


 

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:03.08.2026 ರ ಹವಾಮಾನ ಇಲಾಖೆಯ ಯೆಲ್ಲೊ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:04.08.2026 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.


ಉಳಿದಂತೆ ಎಲ್ಲಾ ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೊತ್ತರ ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.