ಉಡುಪಿ: ನಗರದ ರಥಬೀದಿ ಸಮೀಪದ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಮಂಗಳವಾರ ನಡೆದಿದೆ.
ವಿದ್ಯಾರ್ಥಿ ಕೆರೆಯಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಈಜುಪಟು ಈಶ್ವರ್ ಮಲ್ಪೆ ಹಾಗೂ ಅವರ ತಂಡ ಸ್ಥಳಕ್ಕೆ ಧಾವಿಸಿ ಕೆರೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ವಿದ್ಯಾರ್ಥಿಯ ಸ್ಥಿತಿ ಗಂಭೀರವಿರುವುದಾಗಿ ತಿಳಿದುಬಂದಿದ್ದು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
